ಅಪಘಾತ ಓರ್ವ ವ್ಯಕ್ತಿ ಸಾವು
ಕೆಟಿಎಂ ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾದ ಘಟನೆ ಧಾರವಾಡ ಹೊರವಲಯದಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಮರೇವಾಡ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿಯೇ ಬೈಕ್ ಸವಾರ ಸಾವನಪ್ಪಿದ್ದಾನೆ. ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನುಜ್ಜುಗುಜ್ಜಾಗಿದೆ. KA 25 HE 5076 ನಂಬರಿನ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.