ಧಾರವಾಡ ಹೊರವಲಯದಲ್ಲಿ ಕ್ಯಾಂಟರ್ ಪಲ್ಟಿ ಇಬ್ಬರ ದುರ್ಮರಣ

ಧಾರವಾಡ.

ನಿದ್ರೆ ಮಂಪರಿನಲ್ಲಿ ಕ್ಯಾಂಟರ್ ಚಲಾಯಿಸುತ್ತಿದ್ದ ಸಮಯದಲ್ಲಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಸಾವಿಗೀಡಾಗಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳ್ಳಂಬೆಳಿಗ್ಗೆ ಸಂಭವಿಸಿದೆ.ಘಟನೆಯ ಮಾಹಿತಿ ಸಿಗುತ್ತಿದ್ದ ಸ್ಥಳಕ್ಕೆ ತೆರಳಿದ ಗ್ರಾಮೀಣ ಠಾಣೆ ಪೊಲೀಸರು ಆಸ್ಪತ್ರೆಗೆ ಗಾಯಾಳುಗಳನ್ನ ರವಾನೆ ಮಾಡಿದ್ದು, ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳಿಸಿದ್ದಾರೆ. ಕ್ಯಾಂಟರ್‌ನಲ್ಲಿದ್ದ ನಾಲ್ವರ ಬಗ್ಗೆ ಪೊಲೀಸರು ಮಾಹಿತಿಯನ್ನ ಕಲೆ ಹಾಕಬೇಕಿದ್ದು, ಪ್ರಕರಣವನ್ನ ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನ ಜರುಗಿಸಿದ್ದಾರೆ.