ವಿದ್ಯಾರ್ಥಿನಿ ಸಾವು; ತನಿಖೆಗೆ ಡಿವೈಎಫ್ಐ ಒತ್ತಾಯ | Shiggaon |
ಶಿಗ್ಗಾಂವಿ ಸರ್ಕಾರಿ ಅಂಕಲಕೋಟಿ ಪ್ರಥಮ ದರ್ಜೆ ಕಾಲೇಜಿನ ಶೀಲವಂತ ಸೋಮಾಪುರ ಗ್ರಾಮದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನುಪಪ್ಪಿದ್ದು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಡಿವೈಎಫ್ಐ ವತಿಯಿಂದ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು. ಪಟ್ಟಣದಲ್ಲಿ ಹಾಕಿರುವ ಸಿಸಿ ಕ್ಯಾಮರಾಗಳು ದುರಸ್ತಿಯಲ್ಲಿವೆ. ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ಈ ಪ್ರಕರಣ ನಡೆದಿರುವುದು ಆಘಾತಕಾರಿ ಸಂಗತಿ ಎಂದು ಡಿವೈಎಫ್ಐ ಸಂಘಟನಾ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದು, ಶೀಘ್ರ ಮೃತ ವಿದ್ಯಾರ್ಥಿನಿಯ ಪಾಲಕರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.