ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗಲಿ ವಿದ್ಯಾರ್ಥಿ ಸಾವು The death of a student when the flag pole stops

ತುಮಕೂರು: ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋಗಿ ಮೂವರಿಗೆ ವಿದ್ಯುತ್ ತಂತಿ ತಾಗಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಗಳಾದ ಶಶಂಕ್ (16 ವ) ಪವನ್ (22 ವ) ಚಂದನ್ (16 ವ) ವಿದ್ಯಾರ್ಥಿಗಳು ಧ್ವಜಸ್ತಂಭ ನಿಲ್ಲಿಸುವಾಗ ಶಾಲೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗಲಿ ಗಾಯಗೊಂಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಚಂದನ್ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ
ಧ್ವಜಸ್ತಂಭ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಹೊಡೆದಿರುವುದು ಆತಂಕ ಮೂಡಿದ್ದು ಗ್ರಾಮದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ
ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ