ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

ಮಡಿಕೇರಿಯಲ್ಲಿ ಪ್ರವಾಸಕ್ಕೆಂದು ಬಂದಿದ್ದ ಯುವತಿ ಸಾವನ್ನಪ್ಪಿದ್ದಾಳೆ. ಮಡಿಕೇರಿಯ ಡೇರಿ ಫಾರಂ ಬಳಿಯ ಕೂರ್ಗ್ ವ್ಯೂ ಹೋಂಸ್ಟೇಯಲ್ಲಿ ಈ ಯುವತಿ ವಾಸ್ತವ್ಯ ಮಾಡಿದ್ದಳು. ಸ್ನಾನಕ್ಕೆಂದು ತೆರಳಿದ್ದಾಗ ಗೀಸರ್ ನಿಂದ ಗ್ಯಾಸ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೇತ ಯುವತಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ನಿವಾಸಿ ವಿಘ್ನೇಶ್ವರಿ (24) ಎಬ್ನಲಾಗಿದೆ. ಈಕೆ ಮುಂಬೈನಲ್ಲಿ ಉದ್ಯೋಗದಲ್ಲಿದ್ದರು, ತಮ್ಮ ನಾಲ್ವರು ಸ್ನೇಹಿತೆಯರೊಂದಿಗೆ ಎರಡು ದಿನಗಳ ಹಿಂದೆ ಮಡಿಕೇರಿಗೆ ಬಂದಿದ್ದರು. ಭಾನುವಾರ ರಾತ್ರಿ ಸ್ನಾನಕ್ಕೆ ತೆರಳಿದ್ದ ವೇಳೆ ಬಹಳ ಸಮಯದವರೆಗೂ ಕೊಠಡಿಯಿಂದ ಹೊರಬಾರದಿದ್ದಾಗ ಅನುಮಾನಗೊಂಡ ಸ್ನೇಹಿತೆಯರು ಬಾಗಿಲು ತೆರೆದು ನೋಡಿದಾಗ ವಿಘ್ನೇಶ್ವರಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಈಕೆ ಮೃತಪಟ್ಟಿದ್ದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.