ಕೃಷಿ ವಿವಿ 34ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದ ರಾಜ್ಯಪಾಲರು

ಧಾರವಾಡದ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿಂದು ಸಂಭ್ರಮ ಮನೆ ಮಾಡಿತ್ತು. ಇಂದು 34ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ರಾಜ್ಯಪಾಲರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಚಿನ್ನದ ಪದಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.