ಇಂದಿನಿಂದ ಬಿಬಿಎಂಪಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಬಿಬಿಎಂಪಿ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬಿಬಿಎಂಪಿ ಸೇವೆಗಳಲ್ಲಿ ಸಂಪೂರ್ಣ ವ್ಯತ್ಯಯವಾಗಲಿದೆ.
ಬಿಬಿಎಂಪಿ ಕಾರ್ಯಚಟುವಟಿಕೆ ಸಂಪೂರ್ಣ ಸ್ಥಗಿತವಾಗಲಿದ್ದು, ಕೆಲಸ ಸ್ಥಗಿತಗೊಳಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ವೃಂದ ನೇಮಕಾತಿ ನಿಯಮಗಳನ್ವಯ 5219 ಹುದ್ದೆ ನೇಮಕ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ರಮ ನೇಮಕಾತಿಯನ್ನು ವಿರೋಧಿಸಿ, ಪಾಲಿಕೆಯಲ್ಲಿ ನಡೀತಿರೊ ನಿಯಮ ಬಾಹಿರ ಚಟುವಟಿಕೆಗಳನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಈ ಎಲ್ಲಾ ಬೇಡಿಕೆ ಈಡೇರುವವರೆಗೂ ಮುಷ್ಕರ ವಾಪಸ್ ಪಡೆಯದಿರಲು ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಮುಷ್ಕರ ಆರಂಭವಾಗಿದೆ.
Tags ಪ್ರತಿಭಟನೆ ಬಿಬಿಎಂಪಿ ಬಿಬಿಎಂಪಿ ನೌಕರರು