ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಭೀತಿ ಸೃಷ್ಟಿಸಿದೆ.

ಹುಬ್ಬಳ್ಳಿ: ಬುಧವಾರ ರಾತ್ರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದೆ. ಅಲ್ಲದೇ, ಈ ಹಿಂದೆ ಚಿರತೆಯು ವ್ಯಕ್ತಿಯ ಮೇಲೆರಗಿದ್ದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ. ಇದರಿಂದಾಗಿ ಜನರು ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.
ವ್ಯಕ್ತಿಯ ಮೇಲೆರಗಿದ ಚಿರತೆಹುಬ್ಬಳ್ಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಜನರಲ್ಲಿ ಭಯವನ್ನು ಸೃಷ್ಟಿಸಿದೆ. ಇದರ ಜತೆಗೆ ಕೆಲ ತಿಂಗಳ ಹಿಂದೆ ಚಿರತೆ ವ್ಯಕ್ತಿಯ ಮೇಲೆ ದಾಳಿ ಮಾಡಿರುವ ವಿಡಿಯೋ ವೈರಲ್ ಆಗ್ತಿದೆ. ವೈರಲ್ ವಿಡಿಯೋದಲ್ಲಿ ಸೆರೆಯಾಗಿರುವ ದೃಶ್ಯ ಎಲ್ಲಿ ನಡೆದಿರುವ ಘಟನೆಯದ್ದು ಎಂದು ತಿಳಿದು ಬಂದಿಲ್ಲ.