ಬಂಕಾಪುರ ಪುರಸಭೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆ |Hubli|

ಮುಖ್ಯಮಂತ್ರಿ ಬಸುವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರ ಶಿಗ್ಗಾಂವಿ-ಸವಣೂರು ವ್ಯಾಪ್ತಿಯ ಬಂಕಾಪುರ ಪುರಸಭೆಗೆ ಘೋಷಣೆಯಾಗಿರುವ ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಿನ ಕಾರ್ಯಕರ್ತರ ಸಭೆಯನ್ನು ಗೋಕುಲ ರಸ್ತೆ ಕೆ.ಎಸ್.ಶರ್ಮಾ ಪ್ರಕೃತಿ ಚಿಕಿತ್ಸೆ ಕ್ಯಾಂಪಸ್ ನಲ್ಲಿ ಹುಬ್ಬಳ್ಳಿಯಲ್ಲಿ ನಡೆಸಿದರು. ಈ ವೇಳೆ ಮಾತನಾಡಿ, ಬಂಕಾಪುರ ಪುರಸಭೆ ಚುನಾವಣೆ ನಮ್ಮ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಬೇಕು ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು. ಇದೆ ವೇಳೆ ಬಂಕಾಪುರದ ಕೆಲ ಕಾಂಗ್ರೆಸ ಮುಖಂಡರು ಬಿಜೆಪಿ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಮೋಹನ ಲಿಂಬಿಕಾಯಿ, ಶಿಗ್ಗಾಂವಿ ತಾಲೂಕು ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ದೇವಣ್ಣ ಚಾಕಲಬ್ಬಿ, ರೇಣುಕಗೌಡ ಪಾಟೀಲ, ಬಸುವರಾಜ ನಾರಾಯಣಪುರ, ಗುರು ಕೆಂಗಲಮಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.