ಗುಜರಾತ್ ಮುಖ್ಯಮಂತ್ರಿ ʼವಿಜಯ್ ರೂಪಾನಿʼ ದಿಢೀರ್ ರಾಜೀನಾಮೆ

ಡಿಜಿಟಲ್ ಡೆಸ್ಕ್ : ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದ್ದು, ರಾಜೀನಾಮೆ ಪತ್ರವನ್ನ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ರೂಪಾನಿ ಸಧ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾರನ್ನ ಭೇಟಿಯಾದ ರೂಪಾನಿ, ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ. ಇನ್ನು ಮುಂದಿನ ವರ್ಷ ವಿಧಾನ ಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.