ಪ್ರಕಾಶ ಖಂಡ್ರೆಯವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಪ್ರಭು ಚವ್ಹಾಣ |Bidar|

ಗಡಿ ಬೀದರ್ ಜಿಲ್ಲೆಯಲ್ಲಿ ದಿನ ಕಳೆದಂತೆ ವಿಧಾನಪರಿಷತ್ ಚುನಾವಣೆ ಪ್ರಚಾರ ಭರದಿಂದ ಸಾಗಿದೆ. ವಿಧಾನಪರಿಷತ್ ಚುನಾವಣೆ ಪ್ರಯುಕ್ತ ತಮ್ಮ ಪಕ್ಷದ ಅಭ್ಯರ್ಥಿ ಪರ ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹುಮನಾಬಾದ ತಾಲ್ಲೂಕಿನ ಹಳ್ಳಿಖೇಡ ಹಾಗೂ ದುಬುಲಗುಂಡಿ ಗ್ರಾಮಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರೊಂದಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರ, ಉಪಾಧ್ಯಕ್ಷರ, ಸದಸ್ಯರ ಹಾಗೂ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಪ್ರಚಾರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹೀಗಾಗಿ ಈ ಚುನಾವಣೆಯಲ್ಲಿ ಪ್ರಕಾಶ ಖಂಡ್ರೆಯವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮಾಜಿ ಶಾಸಕ ಸುಭಾಷ ಕಲ್ಲೂರ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಮುಖಂಡರಾದ ಅರಹಂತ ಸಾವಳೆ, ಸೋಮನಾಥ ಪಾಟೀಲ, ಬಸವರಾಜ ಆರ್ಯ ಸೇರಿದಂತೆ ಪಕ್ಷದ ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿದ್ದರು.