ಗುತ್ತಿಗೆದಾರನ ಮೇಲೆ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ. | Dharwad |

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆದಾರ ಅಜೀಜ್ ಮಾಲಿ ಎಂಬುವವರ ಮೇಲೆ ನಡೆದ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಕುಳಿತಿದ್ದ ಅಜೀಜ್ ಅವರ ಮೇಲೆ ವ್ಯಕ್ತಿಯೋರ್ವ ಏಕಾಏಕಿ ಬಂದು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಸದ್ಯ ಈ ಸಂಬಂಧ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಗುತ್ತಿಗೆದಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.