ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ
ಮಗನೊಬ್ಬ ಜನ್ಮ ಕೊಟ್ಟ ತಾಯಿಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಮೃತರನ್ನು ಸುಧಾ ಎಂದು ಗುರುತಿಸಲಾಗಿದೆ. ಹೆತವತವಳನ್ನೇ ಕೊಂದ ದುಶ್ಯಂತ್ ಎಂಬ ಪಾಪಿ ಮಗನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಧ್ಯಾಹ್ನದ ವೇಳೆಗೆ ಕೊಲೆ ಮಾಡಿರುವ ಸಾಧ್ಯತೆ ಇದ್ದು, ಸಂಜೆ 5.45ಕ್ಕೆ ಕಿರಿಯ ಪುತ್ರ ಸಂತೋμï ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯ ನಿಖರ ಕಾರಣ ತಿಳಿದು ಬಂದಿಲ್ಲ.