ಯುವತಿಗೆ ಚಾಕು ಇರಿದು, ತಾನು ಕತ್ತು ಕೊಯ್ದುಕೊಂಡ ಯುವಕ

ಯುವತಿಗೆ ಚಾಕು ಇರಿದು, ತಾನು ಕತ್ತು ಕೊಯ್ದುಕೊಂಡ ಯುವಕ

ಉಡುಪಿ: ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಶ್ರೀ ವಿಠಲ ಭಂಡಾರಿ (28) ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಸಂತೆಕಟ್ಟೆಯ ರೋಬೊ ಸಾಫ್ಟ್ ಕಂಪನಿ ಎದುರು ಸೌಮ್ಯಶ್ರೀ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬಂದ ಸಂದೇಶ್ ಏಕಾಏಕಿ ಜಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಕುತ್ತಿಗೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಯುವಕ ಸಂದೇಶ್ ಕುಲಾಲ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೇಲ್ನೋಟಕ್ಕೆ ಪ್ರೇಮ ವೈಫಲ್ಯ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.