ವಚನ ಸಾಹಿತ್ಯಕ್ಕೆ ದೊಡ್ಡ ಶಕ್ತಿ ಇದೆ: ಶಾಸಕ ಖಾಶೆಂಪುರ್

ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಕಂಗನಕೋಟ ಗ್ರಾಮದಲ್ಲಿ ಶ್ರೀ ಅಕ್ಕಮಹಾದೇವಿ ಮಹಿಳಾ ಜಾನಪದ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಮಾನ್ಯ ಯೋಜನೆಯಡಿಯ ಪ್ರಾಯೋಜಿತ ಸಾಂಸ್ಕೃತಿಕ ಕಾರ್ಯಕ್ರಮ 'ಅಕ್ಕಮಹಾದೇವಿಯವರ ವಿಚಾರ ಸಂಕಿರಣ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಹನ್ನೆರಡನೆಯ ಶತಮಾನದಲ್ಲಿ ಶರಣರು ರಚಿಸಿದ ವಚನಗಳು ದಿನಕ್ಕೆ ಐದು ವಚನಗಳನ್ನು ಓದಿದರೇ ಸಾಕು ನಮಗೆ ಬಿಪಿ ಸುಗರ್ ಏನು ಇರಲ್ಲ. ವಚನ ಸಾಹಿತ್ಯಕ್ಕೆ ಅಂತಹ ದೊಡ್ಡ ಶಕ್ತಿ ಇದೆ. ಆದರೇ, ನಾವು ಅವುಗಳನ್ನು ಓದುವುದಿಲ್ಲ.ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ. ಹಳ್ಳಿಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆಗಬೇಕಾಗಿದೆ. ಆ ಮೂತಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸಬಹುದಾಗಿದೆ. ಅಂಬೇಡ್ಕರ್ ರವರು ಬರೆದಿರುವ ಸಂವಿಧಾನದಲ್ಲಿ ಮೀಸಲಾತಿ ಮೂಲಕ ಎಲ್ಲರಿಗೂ ಸಮಾನತೆ ನೀಡಿದ್ದಾರೆ. ಶರಣರು ಬರೆದಿರುವ ವಚನಗಳು ಬಹಳಷ್ಟು ಅರ್ಥಪೂರ್ಣವಾಗಿವೆ. ಬೀದರ್ ಶರಣರ ನಾಡು. ಇದು ಬಸವಣ್ಣನವರ ಕರ್ಮ ಭೂಮಿಯಾಗಿದೆ. ಅದರಂತೆ ಪ್ರತಿಯೊಬ್ಬರೂ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕಾಗಿದೆ. ಕಂಗನಕೋಟದ ಅಕ್ಕನ ಬಳಗ ಒಳ್ಳೆಯ ಕೆಲಸ ಮಾಡುತ್ತಿದೆ. ಇಂತಹ ಕೆಲಸಗಳಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕಾಗಿದೆ. ಹನ್ನೆರಡನೆಯ ಶತಮಾನದಲ್ಲಿಯೇ ಬಸವಣ್ಣನವರು ಸಾಮಾಜಿಕ ಸಮಾನತೆಯ ವಿಚಾರವಾಗಿ ಧ್ವನಿ ಎತ್ತಿದ್ದರು. ಅಂತವರ ಮಾರ್ಗದಲ್ಲಿ ಸಾಗುತ್ತಿರುವ ಅಕ್ಕನ ಬಳಗದವರ ಕಾರ್ಯ ಮಾದರಿ ಕಾರ್ಯವಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಇದೇ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಮಾತೆ ಅಕ್ಕಮಹಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು.ಇದೆ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಾದ ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.