ನಾಡಗೀತೆ ಎಷ್ಟು ನಿಮಿಷ ಹಾಡಬೇಕೆಂಬ ಚರ್ಚೆ ನಡೆಯುತ್ತಿದೆ: ಸಚಿವ ಸುನೀಲ್
ಉಡುಪಿ: ನಾಡಗೀತೆಯನ್ನು ಎಷ್ಟು ನಿಮಿಷಕ್ಕೆ ಸೀಮಿತಗೊಳಿಸಬೇಕು? ನಾಡಗೀತೆಯ ಸಂಗೀತ ಯಾವ ರೀತಿ ಇರಬೇಕು? ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಹೇಳಿದ್ದಾರೆ.
ಕನ್ನಡ ಭುವನೇಶ್ವರಿಯ ಫೋಟೋ ಯಾವ ರೀತಿ ಇರಬೇಕು ಎಂಬ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಕನ್ನಡ ಸಂಸ್ಕೃತಿ ಇಲಾಖೆಯ ಮೂಲಕ ಇದಕ್ಕೊಂದು ತಾರ್ಕಿಕ ಅಂತ್ಯ ಮಾಡುತ್ತೇವೆ ಎಂದು ಹೇಳಿದ್ದಾರೆ.
ತಾಯಿ ಭುವನೇಶ್ವರಿ ಫೋಟೋ ರಾಜ್ಯಾದ್ಯಂತ ಒಂದೇ ರೀತಿ ಇರಬೇಕು. ಒಂದೊಂದು ಊರಲ್ಲಿ ಒಂದೊಂದು ರೀತಿ ಇದೆ. ಆದಷ್ಟು ಬೇಗ ಈ ವಿಚಾರ ಇತ್ಯರ್ಥಗೊಳಿಸಲಿದ್ದೇವೆ ಎಂದಿದ್ದಾರೆ.