ವಿಚಾರಣೆಗೆ ತೊಂದರೆಯಾಗುವ ದೃಷ್ಟಿಯಿಂದ ಹೆಚ್ಚಿನ ವಿವರ ನೀಡಲ್ಲ | Mysore |

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಇನ್ನೂ ಸ್ವಲ್ಪಸಮಯ ಬೇಕಿದೆ. ಖಂಡಿತವಾಗಿಯೂ ಈ ಪ್ರಕರಣವನ್ನು ಬೇಧಿಸುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.ಗೃಹ ಸಚಿವರ ಹೇಳಿಕೆ ಒಪ್ಪುವುದಿಲ್ಲ ಎಂದ ಸಿಎಂ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅವರು ಸಿಎಂ ಅವರಿಗೆ ಅದನ್ನು ಹೇಳುವ ಅಧಿಕಾರ ಇದೆ. ಅದಕ್ಕೆ ಹೇಳಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದೆ. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಲಾಗುವುದಿಲ್ಲ. ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ. ಸಂತ್ರಸ್ತೆ ಇನ್ನೂ ಹೇಳಿಕೆ ನೀಡಿಲ್ಲ ಎಂದು ಹೇಳಿದರು.