ಕಬ್ಬಿನ ಬಿಲ್'ಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಮೂರು ದಿನಗಳ ಗಡುವು
ರೈತರ ಕಬ್ಬಿನ ಬಿಲ್ ಪಾವತಿ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಮೂರು ದಿನಗಳ ಗಡುವು ನೀಡಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವರಾದ ಶಂಕರ ಬ. ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರು ಭಯ ಪಡುವ ಆತಂಕ ಇಲ್ಲ. ಈಗಾಗಲೇ ರಾಜ್ಯದ ಸಕ್ಕರೆ ಕಾರ್ಖಾನೆಗಳೊಂದಿಗೆ ಸಭೆ ನಡೆಸಲಾಗಿದೆ. ರಾಜ್ಯ ಸರ್ಕಾರ ರೈತರ ಪರವಾಗಿದೆ. ಅದಕ್ಕಾಗಿ ರೈತರು ಆತಂಕಕ್ಕೆ ಒಳಗಾಗಬಾರದು. ಯಾರೇ ಸಕ್ಕರೆ ಬಿಲ್ ಉಳಿಸಿಕೊಂಡಿದ್ರೂ ತಕ್ಷಣವೇ ಪಾವತಿಗೆ ಸೂಚನೆ ನೀಡಿದ್ದೇನೆ ಎಂದರು.