ಇಂದು ಚಾಮುಂಡಿ ಬೆಟ್ಟದಲ್ಲಿ ಜಾತ್ರೆ
ಮೈಸೂರಿನಲ್ಲಿಂದು ಆರಾಧ್ಯ ದೈವ ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ಇಂದು ಸಂಜೆ 7 ಗಂಟೆಗೆ ಜರುಗಲಿದೆ. ಇದಕ್ಕಾಗಿ ತಾಯಿ ಚಾಮುಂಡೇಶ್ವರಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ದೇವಾಲಯದ ತುಂಬಾ ಎಲ್ಲೆಡೆ ಮುಂಜಾನೆಯಿಂದಲೇ ಪುಷ್ಪಾಲಂಕಾರ,ವಿವಿಧ ಅಭಿಷೇಕ, ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ರಾಜವಂಶಸ್ಥರಿಂದ ವಿಶೇಷ ಪೂಜೆ ಸಲ್ಲಿಕೆ ನಡೆಯುತ್ತದೆ. ನಂತರ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಲಿದ್ದಾರೆ.ಪ್ರತಿ ವರ್ಷ ದಸರಾ ಬಳಿಕ ಬೆಟ್ಟದ ಜಾತ್ರೆ ನಡೆಯೋದು ವಾಡಿಕೆ. ಅದರಂತೆ ಈ ಬಾರಿ ಸಹ ಜಾತ್ರೆ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆಗಳು ಬೆಳಗಿನಿಂದಲೇ ಜೋರಾಗಿವೆ. ಆದ್ರೆ ಈ ಬಾರಿ ದೊಡ್ಡ ತೇರಿನ ಬದಲು ಚಿಕ್ಕ ತೇರಿನಲ್ಲಿ ರಥೋತ್ಸವ ನಡೆಯುತ್ತಿದೆ. ಕರೊನಾ ಹಿನ್ನೆಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ. ಚಾಮುಂಡಿಬೆಟ್ಟದಲ್ಲಿ ಜನರಿಲ್ಲದ ಜಾತ್ರೆ ನಡೆಸಲಾಗುತ್ತಿದೆ. ಇದೇ ವೇಳೆ ದೇವಾಲಯದ ಒಳಾವರಣದಲ್ಲೇ ಮಂಟಪೋತ್ಸವ ಜರುಗಲಿದೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ತ್ರಿಷಿಕಾ ಕುಮಾರಿ ಒಡೆಯರ್, ಶಾಸಕ ಎಲ್.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.