ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ವಿದ್ಯಾರ್ಥಿಗಳಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಾರಿಗೆ ಸೌಲಭ್ಯ

ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ವಿದ್ಯಾರ್ಥಿಗಳಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಾರಿಗೆ ಸೌಲಭ್ಯ
ಸಂಸ್ಥೆ ವ್ಯಾಪ್ತಿಯಲ್ಲಿನ ಹುಬ್ಬಳ್ಳಿ ,ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬಾಗಲಕೋಟ, ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗಗಳ ಎಲ್ಲ ಘಟಕಗಳಿಂದ ಸಿಇಟಿ ಪರೀಕ್ಷೆಗಳಿಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಅವಶ್ಯಕತೆ ಹಾಗೂ ಬೇಡಿಕೆಗಳಿಗನುಗುಣವಾಗಿ ಸಾರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ವಿಭಾಗಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.