ರಸ್ತೆ ದಾಟುವ ವೇಳೆ ವ್ಯಕ್ತಿ ಮೇಲೆ ಹರಿದ ಲಾರಿ: ಸ್ಥಳದಲ್ಲಿಯೇ ಸಾವು
ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ವ್ಯಕ್ತಿಯೋರ್ವನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ.ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನೂ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ ಶವಾಗರಕ್ಕೆ ರವಾನೆ ಮಾಡಲಾಗಿದೆ.ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಅಪಘಾತ ಪಡಿಸಿದ ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲು ಮಾಡಿದ್ದಾರೆ.