UKG ಮಗುವನ್ನು ಫೇಲ್ ಮಾಡಿ ಶಿಕ್ಷಣ ಸಂಸ್ಥೆಕೊನೆಗೂ ಎಚ್ಚೆತ್ತ ಶಿಕ್ಷಣಾಧಿಕಾರಿಗಳು ಶಾಲೆಗೆ ನೋಟಿಸ್‌

UKG ಮಗುವನ್ನು ಫೇಲ್ ಮಾಡಿ ಶಿಕ್ಷಣ ಸಂಸ್ಥೆಕೊನೆಗೂ ಎಚ್ಚೆತ್ತ ಶಿಕ್ಷಣಾಧಿಕಾರಿಗಳು ಶಾಲೆಗೆ ನೋಟಿಸ್‌

ನೇಕಲ್: ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಸಂಸ್ಥೆ ಎಡವಟ್ಟು ಮಾಡಿಕೊಂಡಿದೆ. ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಫಜೀತಿಗೆ ಸಿಲುಕಿದೆ.

ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿಯನ್ನು ಸಂಸ್ಥೆ ಫೇಲ್ ಮಾಡಿದ್ದು, ಇದೀಗ ಶಾಲೆಯ ಆಡಳಿತ ಮಂಡಳಿ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದು, ಮಗುವನ್ನು ಏನು ಮಾಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಕೂಡ ಸರಣಿ ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

ಮಗುವನ್ನು ಫೇಲ್ ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ ಹೃದಯ ಮೊದಲೇ ಇಲ್ಲ. ಈ ಮಹಾಕೃತ್ಯ ಗೊತ್ತಾದ ಕೂಡಲೇ ಆನೇಕಲ್ ತಾಲೂಕು ಶಿಕ್ಷಣ ಇಲಾಖೆಗೆ ಮಾಹಿತಿ ತಿಳಿಸಿದ್ದೇನೆ. ನಾನು ಕೂಡ ಒಮ್ಮೆ ಈ ಶಾಲೆಗೆ ಸದ್ಯದಲ್ಲೇ ಭೇಟಿ ನೀಡಿ ಪಾವನಾಗಲು ಬಯಸಿದ್ದೇನೆ ಎಂದು ಮಾಜಿ ಸಚಿವರು ಬರೆದುಕೊಂಡಿದ್ದಾರೆ.

ಇದೀಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಶಾಲೆಗೆ ನೋಟಿಸ್ ಜಾರಿ ಮಾಡಿದೆ.ಸೆಂಟ್ ಜೋಸೆಫ್ ಚಾರ್ಮಿನೆಡ್ ಶಾಲೆಗೆ ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ನೋಟಿಸ್ ಜಾರಿ ಮಾಡಿದ್ದಾರೆ. ಅನುತ್ತೀರ್ಣ ಮಾಡಿರುವ ಕುರಿತು ಮಾಹಿತಿ ಪಡೆದಿದ್ದಾರೆ.