ನಿರುದ್ಯೋಗ ಪ್ರಮಾಣ ಹೆಚ್ಚಳ: ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

ನಿರುದ್ಯೋಗ ಪ್ರಮಾಣ ಹೆಚ್ಚಳ: ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

ನವದೆಹಲಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಉದ್ಯೋಗಕ್ಕೆ ಮಾರಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಗಸ್ಟ್‌ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್‌ ಮಾನಿಟರಿಂಗ್ ಇಂಡಿಯನ್ ಎಕಾನಮಿಯ(ಸಿಎಂಐಇ) ದತ್ತಾಂಶ ಆಧರಿಸಿ ಪ್ರಕಟಿಸಿರುವ ಮಾಧ್ಯಮದ ವರದಿಯ ಸ್ಕ್ರೀನ್‌ ಶಾಟ್‌ ಅನ್ನು ಟ್ವಿಟ್ಟರ್‌ನಲ್ಲಿ ಟ್ಯಾಗ್‌ ಮಾಡಿದ್ದಾರೆ.

ಉದ್ಯೋಗದ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರ ಮಾರಕವಾಗಿದೆ. ಈ ಸರ್ಕಾರ ತನ್ನ ಸ್ನೇಹಿತರಿಗೆ ಸಂಬಂಧವಿರದ ಯಾವುದೇ ವ್ಯಾಪಾರ, ಉದ್ಯೋಗವನ್ನು ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದೂ ಇಲ್ಲ. ಬದಲಿಗೆ, ಬೇರೆಯವರಿಂದ ಉದ್ಯೋಗವನ್ನು ಕಿತ್ತು ಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ದೂರಿದ್ದಾರೆ.