ವೀರೇಂದ್ರ ಹೆಗ್ಗಡೆ ಅವರಿಗೆ 'ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ' ಪ್ರದಾನ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 'ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ' ಪ್ರದಾನ ಮಾಡಲಾಯಿತು.
ವಿವಿಧ ರಂಗದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬುಧವಾರ ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಇದ್ದರು.