ವೀರೇಂದ್ರ ಹೆಗ್ಗಡೆ ಸನ್ಮಾನ
ಧಾರವಾಡದ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಅಂತರಾಷ್ಟ್ರೀಯ ತರಬೇತಿ ಕೇಂದ್ರದ ನೂತನ ಕಟ್ಟಡಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಎಸ್. ಡಿ. ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳು ಜೀವಂದರ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ 9ಲೈವ್ ಆಡಳಿತ ಮಂಡಳಿ ವತಿಯಿಂದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚಾನೆಲ್ ನ ನಿರ್ದೇಶಕರಾದ ಸಂಜಯ ಡೋಂಗ್ರೆ, ರಮೇಶ ನರೇಂದ್ರ, ವಿಕ್ರಮ ಪಾಂಡೆ, ಶಿವಕುಮಾರ ತೊರಗಲ್ ಹಾಗೂ ಆಫಜಲ್ ಗೊರವನಕೊಳ್ಳ ಉಪಸ್ಥಿತರಿದ್ದರು.