ಶಾಸಕ ಅಬ್ಬಯ್ಯ ಸುಳ್ಳು ಪ್ರಚಾರ ಬಹಿರಂಗ ಚರ್ಚೆಗೆ ವಿಜಯ ಗುಂಟ್ರಾಳ ಆಹ್ವಾನ
ಹುಬ್ಬಳ್ಳಿ
ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಕ್ಕು ಪತ್ರ ನೀಡುತ್ತಿರುವುದನ್ನು ಶಾಸಕ ಪ್ರಸಾದ್ ಅಬ್ಬಯ್ಯ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ತಿದಾರೆ. ತಾವೇ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ಕೊಡಿಸುತ್ತಿರೋದಾಗಿ ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು. ನಂತರ ನಿಜವಾಗಿಯೂ ಕೆಲಸ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಇಲ್ಲವೆ ಬಹಿರಂಗ ಚರ್ಚೆಗೆ ಬರುವಂತೆ ಆಗ್ರಹಿಸಿದರು.