ಸಂಪುಟ ವಿಸ್ತರಣೆಯ ಚರ್ಚೆ ಆಗಿಲ್ಲ: ಸಿ.ಎಂ. ಬೊಮ್ಮಾಯಿ

ಬೆಂಗಳೂರು: ಮತ್ತೆ ಸಂಪುಟ ವಿಸ್ತರಣೆ ಮತ್ತು ಸಚಿವರ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಜತೆ ಚರ್ಚೆ ನಡೆಸಿಲ್ಲ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅರುಣ್‌ಸಿಂಗ್ ಅವರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಮತ್ತು ಪಕ್ಷದ ಸಂಘಟನೆಯ ವಿಚಾರವಾಗಿ ಮಾತ್ರ ಮಾತುಕತೆ ನಡೆಸಿದ್ದೇನೆ ಎಂದರು.
ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ಮುಂದೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚಿಸಲಾಗುವುದು. ಅದಕ್ಕಾಗಿ ಇನ್ನೊಮ್ಮೆ ಬರುತ್ತೇನೆ ಎಂದು ಹೇಳಿದರು.