ಮತಾಂತರ ಮಾಡುವವರ ವಿರುದ್ಧ ಕಾನೂನು ತರುತ್ತೇವೆ

ಹುಬ್ಬಳ್ಳಿ

ಬಲಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕಾನೂನು ತರುವುದು ಅವಶ್ಯವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕ್ರಿಶ್ಚಿಯನ್ ಮತಾಂತರಕ್ಕೆ ಹೆಚ್ಚು ದಲಿತ ಸಮುದಾಯದ ಜನತೆ ಬಲಿಯಾಗಿತ್ತಿದ್ದಾರೆ. ಇತ್ತೀಚೆಗೆ ಲಿಂಗಾಯತರು ಕೂಡಾ ಮತಾಂತರವಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದರ ಕುರಿತು ಒಂದು ಕಟ್ಟುನಿಟ್ಟಿನ ಕಾನೂನು ತರುತ್ತೇವೆ ಎಂದು ತಿಳಿಸಿದ್ದಾರೆ.