ನಮ್ಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯವಿಲ್ಲ ಎಂ.ಬಿ.ಪಾಟೀಲ್ | Bangalore |
ಈ ಹಿಂದೆ 99 ಉಪಪಂಗಡ ಸೇರಿಸಿ, ವೀರಶೈವರನ್ನು ಸೇರಿಸಿ, ಧರ್ಮದ ಮಾನ್ಯತೆ ಕೇಳಿದ್ದೆವು. ಇಂದು ಎಲ್ಲರೂ ಒಗ್ಗಟ್ಟಿನಿಂದ ಹೋಗುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯ ಇಲ್ಲ. ಆದರೆ, ಏನು ಸಮಸ್ಯೆಯಾಗುತ್ತಿದೆ ಎಂದು ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಬೆಂಗಳೂರಿನ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಎಲ್ಲರೂ ಸೇರಿ ಸಮಾಜಕ್ಕೆ ಒಳ್ಳೆಯದು ಮಾಡುವ ಉದ್ದೇಶ ಇದೆ. ಅದರ ಹೊರತಾಗಿ ಕೂಗು, ಹೋರಾಟ, ಪ್ರತ್ಯೇಕ ಎಂದು ಎಲ್ಲೂ ಹೇಳಿಲ್ಲ. ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದರೆ ಯಾರೂ 2ಎ ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಚುನಾವಣೆ ನಂತರ, ಎಲ್ಲರೂ ಸೇರಿ ಮುಕ್ತವಾಗಿ ಶಾಂತ ರೀತಿಯಿಂದ ಎಲ್ಲರನ್ನೂ ಸೇರಿಸಿ ಒಮ್ಮತದ ಅಭಿಪ್ರಾಯದೊಂದಿಗೆ ಎಂದು ಹೇಳಿದ್ದೇನೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಲಿಂಗಾಯತ ವಿಚಾರಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಜತೆಗೂ ಮಾತನಾಡುವೆ ಎಂದು ತಿಳಿಸಿದ್ದಾರೆ.