ಕಳೆದ ಬಾರಿಗಿಂತ ಈ ಬಾರಿ ಪ್ರಥಮ ಪ್ರಾಶ್ಯಸ್ತ್ಯದಲ್ಲಿ ಕಡಿಮೆ ಮತಗಳು ಬಂದು, ಅವು ವಿಭಜನೆಯಾಗಿವೆ. ಈ ಸಂಬಂಧ ಪಕ್ಷದ ಚೌಕಟ್ಟಿನಲ್ಲಿ ಎಲ್ಲವನ್ನೂ ಚರ್ಚೆ ಮಾಡಲಾಗುವುದು ಎಂದು ವಿಧಾನ ಪರಿಷತ್ಗೆ ಎರಡನೇ ಬಾರಿಗೆ ಆಯ್ಕೆಯಾದ ಪ್ರದೀಪ್ ಶೆಟ್ಟರ್ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರ ಸಭೆಯ ಸದಸ್ಯರು ನನಗೆ ಮೊದಲ ಪ್ರಾಶ್ಯಸ್ತ್ಯದಲ್ಲೇ ಮತಗಳನ್ನು ನೀಡಿ ಎರಡನೇ ಬಾರಿಗೆ ವಿಧಾನ ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿದ್ದಾರೆ. ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಮುಖ್ಯಮಂತ್ರಿಗಳು, ಮೂರು ಜಿಲ್ಲೆಗಳ ಸಚಿವರು, ಶಾಸಕರು, ಮುಖ್ಯವಾಗಿ ಬಿಜೆಪಿ ಕಾರ್ಯಕರ್ತರು ನನ್ನ ಗೆಲುವಿಗಾಗಿ ಶ್ರಮಿಸಿದ್ದಾರೆ. ಅವರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ.ನಮಗೆ ಹೆಚ್ಚಿನ ಅನುದಾನ ನೀಡಿಕೆ ಇರಬಹುದು, ಪಂಚಾಯ್ತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸದಸ್ಯರಿಗೆ ವೇತನ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇತ್ಯಾದಿ ಸೌಲಭ್ಯಗಳನ್ನು ನೀಡಲು ಸರ್ಕಾರದೊಂದಿಗೆ ಚರ್ಚಿಸಿ ಎಲ್ಲಾ ಸೌಲಭ್ಯಗಳನ್ನು ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು....