ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮುಂಬೈ : ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ. ಸಾಕಿನಾಕಾ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಮಹಿಳೆಯ ಸಂಬಂಧಿಕರ ಪ್ರಕರಣ ದಾಖಲಿಸಿದ್ದಾರೆ.

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಬಳಿಕ ದುಷ್ಕರ್ಮಿಗಳು, ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.