ಬೆಲೆ ಏರಿಕೆಗೆ ಮಹಿಳಾ ಕಾಂಗ್ರೆಸ್ ಪ್ರೊಟೆಸ್ಟ್
ಕೋಲಾರ ಅನಿಲ ಹಾಗೂ ಇಂಧನ ಒಳಗೊಂಡAತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಘಟಕದ ಕಾರ್ಯಕರ್ತರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಮುಂಭಾಗದ ಮುಖ್ಯರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ವೇಳೆ ಪ್ರತಿಭಟನಾ ಸಂಧರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಕೊರೋನ ಸಂಕಷ್ಟದಿAದ ಒಂದು ಕಡೆ ಜನಸಾಮಾನ್ಯರು ಕಷ್ಟ ಪಡುತ್ತಿದ್ದರೆ, ಇತ್ತ ಕೇಂದ್ರ ಸರ್ಕಾರ ಗ್ಯಾಸ್, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಬದುಕಿನ ಮೇಲೆ ಬರೆ ಎಳೆದಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ರತ್ನಮ್ಮ ಮಾತನಾಡಿ, ಬಿಜೆಪಿ ಸರಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿದ್ದು ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಬಡ ಜನರ ಜೀವನ ನಿರ್ವಹಣೆ ದುಸ್ಥರವಾಗಿದೆ. ತಕ್ಷಣ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆ ಕಡಿಮೆ ಮಾಡಬೇಕೆಂದು ಆಗ್ರಹಿಸಿದರು. ಪಕ್ಷದ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಪ್ರಸಾದಬಾಬು, ಮುಖಂಡರುಗಳಾದ, ಲಾಲ್ಬಹದ್ದೂರ್ ಶಾಸ್ತ್ರೀ, ನಾಗರಾಜ್, ವೆಂಕಟಪತೆಪ್ಪ, ಇನ್ಟೆಕ್ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ, ತ್ಯಾಗರಾಜ್, ರಾಜೇಶ್, ನರಸಿಂಹರಾಜು, ಮಹಿಳಾ ಘಟಕದ ಸುಜಾತ, ರೂಪ, ಆಯೇಷ ಹಾಗೂ ಅನೇಕ ಮಹಿಳೆಯರು ಭಾಗವಹಿಸಿದ್ದರು