ವಿಶ್ವ ಕುಸ್ತಿ ಚಾಂಪಿಯನ್‌ಶಿಪ್: ಬಜರಂಗ್ ಪೂನಿಯಾ ಅಲಭ್ಯ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಬಜರಂಗ್ ಪೂನಿಯಾ ಅವರು ಈ ಬಾರಿಯ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ.
ಮೊಣಕಾಲಿಗೆ ಗಾಯ ಆಗಿರುವ ಕಾರಣ ಆರು ವಾರಗಳ ವಿಶ್ರಾಂತಿ ಪಡೆಯುವಂತೆ ಅವರಿಗೆ ವೈದ್ಯರು ಸೂಚಿಸಿದ್ದಾರೆ.
ಅಕ್ಟೋಬರ್ ಎರಡರಿಂದ 10ರ ವರೆಗೆ ನಾರ್ವೆಯ ಓಸ್ಲೊದಲ್ಲಿ ವಿಶ್ವ ಚಾಂಪಿಯನ್‌ಷಿಪ್ ನಡೆಯಲಿದೆ. ವಿಶ್ರಾಂತಿ ಮತ್ತು ಚಿಕಿತ್ಸೆ ನಡೆಯಲಿರುವುದರಿಂದ ಇದಕ್ಕೂ ಮೊದಲು ಅವರಿಗೆ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದಿಲ್ಲ.
ಒಲಿಂಪಿಕ್ಸ್‌ನಲ್ಲಿ ಅವರು ತೀವ್ರ ಗಾಯಗೊಂಡಿದ್ದರು. ಇದಕ್ಕೂ ಮೊದಲು, ಜೂನ್‌ನಲ್ಲಿ ರಷ್ಯಾದಲ್ಲಿ ಸಣ್ಣ ಪ್ರಮಾಣದ ಗಾಯವಾಗಿದ್ದ ಕಾರಣ ಮುಂಬೈನ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು.