ಯಲಹಂಕ: ಗೌರಿ-ಗಣೇಶ ಮೂರ್ತಿ ವಿತರಣೆ

ಯಲಹಂಕ: ಗೌರಿ-ಗಣೇಶ ಮೂರ್ತಿ ವಿತರಣೆ

ಯಲಹಂಕ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕದ ವತಿಯಿಂದ ದೊಡ್ಡಬೊಮ್ಮಸಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಗೌರಿ-ಗಣೇಶ ಮೂರ್ತಿಯನ್ನು ವಿತರಿಸಲಾಯಿತು.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, 'ಪರಿಸರ ಸಂರಕ್ಷಣೆಗೆ ಪೂರಕವಾಗಿ ದೊಡ್ಡಬೊಮ್ಮಸಂದ್ರ ವಾರ್ಡ್‌ನಲ್ಲಿ ಪರಿಸರ ಸ್ನೇಹಿ ಗಣಪನನ್ನು ಪೂಜಿಸಿ, ವಿಸರ್ಜನೆ ಮಾಡಬೇಕು ಎಂದು ತೀರ್ಮಾನಿಸಿ, ಮಣ್ಣಿನಿಂದ ತಯಾರಿಸಿದ ಗೌರಿ-ಗಣೇಶನ ಮೂರ್ತಿಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗಿದೆ' ಎಂದು ತಿಳಿಸಿದರು.

ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ನಾರಾಯಣ, ಬಿಎಂಟಿಸಿ ನಿರ್ದೇಶಕ ಟಿ.ಪಿ.ಪ್ರಕಾಶ್, ಪಾಲಿಕೆ ಮಾಜಿ ಸದಸ್ಯರಾದ ಎಂ.ಈ.ಪಿಳ್ಳಪ್ಪ, ಅಶ್ವತ್ಥ ನಾರಾಯಣಗೌಡ, ಆರ್.ಎಸ್.ಎಸ್ ಮುಖಂಡ ಶ್ರೀಧರ್, ಬಿಜೆಪಿ ಮುಖಂಡರಾದ ಪ್ರಕಾಶ್, ನಂಜಪ್ಪ, ನಾರಾಯಣಸ್ವಾಮಿ, ಮಂಜುನಾಥ್, ಶೋಭ ಹರೀಶ್ ಉಪಸ್ಥಿತರಿದ್ದರು.