ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು. ಸಚಿವ ಪ್ರಭು ಚವ್ಹಾನ
ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಬಂಜಾರ ಸಮಾಜದ ಬೃಹತ್ ಸಮಾವೇಶದಲ್ಲಿ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ. ಬೀದರ ಜಿಲ್ಲೆಯ ಔರಾದ ಪಟ್ಟಣದಲ್ಲಿ ಹಮ್ಮಿಕೊಂಡ ಬೃಹತ್ ಬಂಜಾರ ಸಮಾವೇಶದಲ್ಲಿ ಪಶುಸಂಗೋಪನೆ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮಾತಾ ಜಗದಂಬಾ, ಸಂತ ಸೇವಾಲಾಲ್ ಮಹಾರಾಜರ ದೇವಸ್ಥಾನದ ಭೂಮಿ ಪೂಜೆ ನೇರವೆರಿಸಿ ಮಾತನಾಡಿದ ಅವರು. ಬಂಜಾರ ಸಮಾಜದ ಬಾಂಧವರು ಸುಶಿಕ್ಷಿತರಾಗಬೇಕು,ಯಾವುದೆ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ ಸೇವಾಲಾಲ್ ಮಾಹಾರಜ್ ಹಾಗೂ ಪೂಜ್ಯ ಶ್ರೀ ರಾಮರಾವ ಮಹಾರಾಜರ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು....