ರಾಜ್ಯದಲ್ಲಿ ಕೊರೊನಾ 3 ನೇ ಅಲೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು?Corona 3rd Wave

ರಾಜ್ಯದಲ್ಲಿ ಕೊರೊನಾ 3 ನೇ ಅಲೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು?Corona 3rd Wave

ತುಮಕೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ (Corona 3rd Wave) ವಿಚಾರದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಪ್ರತಿಕ್ರಿಯೆ ನೀಡಿದ್ದು, ಕೊರೊನಾ 3 ನೇ ಅಲೆ ನಿಯಂತ್ರಣಕ್ಕೆ ನಾವು ನಿಗಾ ವಹಿಸಿದ್ದೇವೆ. ಕಂಟೇನ್ಮೆಂಟ್ ಜೋನ್ ಮಾಡಿ ನಿಯಂತ್ರಣಕ್ಕೆ ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಕೊರೊನಾ 3 ನೇ ನಿಯಂತ್ರಣಕ್ಕೆ ನಿಗಾ ವಹಿಸಿದ್ದೇವೆ. ಕಂಟೇನ್ಮೆಂಟ್ ಜೋನ್ ಮಾಡಿ ನಿಯಂತ್ರಣಕ್ಕೆ ಪ್ರಯತ್ನ ಮಾಡಿದ್ದೇವೆ. ಡೆಲ್ಟಾ, ಒಮಿಕ್ರಾನ್ ತಳಿಯೇ ಎಂಬುದನ್ನು ತಿಳಿಯಲು ಕೋವಿಡ್ ಸೋಂಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗಳಿ ಕಳುಹಿಸಲಾಗಿದೆ ಎಂದರು.

ಕೇರಳದಿಂದ ಬರುವವರ ಮೇಲೆ ನಿಗಾ ಇಡಲಾಗಿದೆ. ಶಾಲೆ, ಕಾಲೇಜುಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.