ಕಾಪಿ ನಾಡಿನಲ್ಲಿ ಬಾರಿ ಮಳೆ
ಕಾಫಿನಾಡು ಎಂದು ಖ್ಯಾತಿ ಹೊಂದಿದ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಇಂದು ಜೋರಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೂರಲ್ಲಿ ಭಾರೀ ಮಳೆ ಸುರಿದಿದೆ. ಈ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದೊಂದು ತಿಂಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈದಲ್ಲದೇ ಈಗಾಗಲೇ ಶೀತ ಹೆಚ್ಚಾಗಿ ಕಾಫಿ ಉದುರುತ್ತಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.