ಕೊಪ್ಪಳ ಜಿಲ್ಲೆಯಾದ್ಯಂತ ಬಾರೀ ಮಳೆ
ಕೊಪ್ಪಳ ಜಿಲ್ಲೆಯಾದ್ಯಂತ ಮಳೆಗೆ ಭತ್ತದ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಬೆಳೆ ನಾಶವಾದ ಪ್ರದೇಶಕ್ಕೆ ಶಾಸಕ ಪರಣ್ಣ ಮುನವಳ್ಳಿ ಬೇಟೆ ನೀಡಿ ಪರಿಶೀಲನೆ ನಡೆಸಿದ್ರು. ಅನಂತರ ಪ್ರತಿಕ್ರಿಯೆ ನೀಡಿದ ಅವರು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ, ಆನೇಗುಂದಿ ಹೋಬಳಿಯಲ್ಲಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ಸಂಪೂರ್ಣವಾಗಿ ನೆಲಕ್ಕಚ್ಚಿರುವ ಭತ್ತದ ಬೆಳೆ, ಪರಿಹಾರ ಒದಗಿಸುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾವುದು. ಈ ಬಾರೀ ಅತಿಹೆಚ್ಚು ಬೆಳೆ ಹಾನಿಯಾಗಿದೆ. ಸರ್ಕಾರ ಸಮೀಕ್ಷೆ ಮಾಡಲು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದೆ. ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ದವಾಗಿದೆ ಎಂದರು..