ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ
ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರು ಪೆÇಲೀಸ್ ಠಾಣಾ ವ್ಯಾಪ್ತಿಯ ನಾಗವಾರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೂಲದ ಶ್ರೀಧರ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ನಾಗವಾರದಲ್ಲಿ ಹೋಗುವಾಗ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಶ್ರೀಧರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕುತ್ತಿಗೆ ಹಾಗೂ ತಲೆಭಾಗಕ್ಕೆ ಮಾರಾಕಾಸ್ತ್ರದಿಂದ ಕೊಚ್ಚಿದ್ದಾರೆ. ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಶ್ರೀಧರ್ ಮೃತಪಟ್ಟಿದ್ದಾರೆ. ಹಲ್ಲೆ ಮಾಡುವಾಗ ಆರೋಪಿಗಳು ತಮಿಳಿನಲ್ಲಿ ಮಾತನಾಡುತ್ತಿರುವುದು ತಿಳಿದುಬಂದಿದೆ. ಮಾಹಿತಿ ಆಧರಿಸಿ ಹೆಣ್ಣೂರು ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.