ಜನ ಬಾರ್ ಬೇಡಾ ಅಂದ್ರೆ, ಯಾಕೆ ಅಂತಾ ಪೊಲೀಸರ ಗುಂಡಾ ವರ್ತನೆ ಮುಂದಾಗಿದ್ದಾರೆ

ಬೆಳ್ಳಂಬೆಳಗ್ಗೆ ಪೊಲೀಸರ ಗೂಂಡಾ ವರ್ತನೆ ಹೆಚ್ಚಾಗಿದ್ದು, ಮನೆ ಬಾಗಿಲು ಮುರಿದು ಒಳಗೆ ನುಗ್ಗಿರುವ ಘಟನೆ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಎಳೆದೊಯ್ದ ಪೊಲೀಸರ ಪಡೆ ಗೂಂಡಾ ವರ್ತನೆ ತೋರಿದ್ದಾರೆ. ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಪ್ರತಿಭಟಿಸಿದ್ದ ಗ್ರಾಮಸ್ಥರಿಗೆ ಖಾಕಿ ಪಡೆ ಮನೆಗೆ ನುಗ್ಗಿ ಧಮಕ್ಕಿ ಹಾಕಿ ಎಳೆದುಕೊಂಡು ಹೋಗಿದ್ದಾರೆ. ಒಂದೇ ಮನೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಗ್ರಾಮಕ್ಕೆ ಬಾರ್ ಬೇಡಾ ಎಂದು ವಿರುದ್ಧ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದ ಗ್ರಾಮಸ್ಥರು, ಈ ನೆಪದಲ್ಲಿ ಮೂವರನ್ನು ಬಂಧಿಸಿದ್ದಾರೆ. ಕಡೂರು ಪಿಎಸೈ ರಮ್ಯಾ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಒಂದು ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.