ಬಾಂಗ್ಲಾ ಹಿಂದೂಗಳ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

ಕಲಬುರ್ಗಿ ಜಿಲ್ಲೆಯ ಅಫಜಲಪೂರ ಪಟ್ಟಣದಲ್ಲಿ ಯುವ ಬ್ರಿಗೇಡ್ ಅಫಜಲಪುರ ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಶಾಂತಿಯುತ ಪಂಜಿನ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಸುನೀಲ್ ಶೆಟ್ಟಿ,ಮಾಹಾಂತೇಶ ಗೌರ,ಪ್ರಭಾವತಿ ಮೇತ್ರೆ,ಭಾಗೇಶ ಬೋರೆಗಾಂವ,ಆನಂದ ಶೆಟ್ಟಿ ಹಾಗೂ ಯುವಾಬ್ರಿಗೇಡ್ ಕಾರ್ಯಕರ್ತರು ಉಪಸ್ಥೀತರಿದ್ದರು.