ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಮನವಿ

ಕರ್ನಾಟಕದ ಯುವ ರತ್ನ ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬಳ್ಳಾರಿಯ ಹಳೆಯ ಬಸ್ ನಿಲ್ದಾಣಕ್ಕೆ ಹಾಗೂ ಪ್ರಮುಖ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಹಾಗೂ ಬಳ್ಳಾರಿಯ ಯಾವುದಾದರೂ ಒಂದು ಸರ್ಕಲಿನಲ್ಲಿ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ನಿರ್ಮಿಸಬೇಕೆಂದು ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರ ಹನುಮೇಶ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.