ನಾಳೆ ಬೃಹತ್ ಕೋವಿಡ್ ಲಸಿಕಾ ಅಭಿಯಾನ
ಹುಬ್ಬಳ್ಳಿ
ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರವು ಸೆಪ್ಟಂಬರ್ 17 ರಂದು ಬೃಹತ್ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಇದುವರೆಗೆ ಕೋವಿಡ್ ಲಸಿಕೆ ಪಡೆಯದಿರುವವರು ಹಾಗೂ ಎರಡನೇ ಡೋಸ್ ಲಸಿಕೆಗೆ ಅರ್ಹತೆ ಹೊಂದಿದವರು ಲಸಿಕೆ ಪಡೆಯಬಹುದು. ಲಸಿಕೆ ನೀಡಲು ಜಿಲ್ಲೆಯಲ್ಲಿಯೂ ಬೃಹತ್ ಅಭಿಯಾನಕ್ಕೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಸೂಚಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಶಹರ ಹಾಗೂ ಗ್ರಾಮೀಣ ಭಾಗದಲ್ಲಿ ಲಸಿಕೆಗಳನ್ನು ನೀಡಲು 416 ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಎಲ್ಲಾ ತಂಡಗಳು ಇಂದೇ ಲಸಿಕೆಗಳನ್ನು ಸಂಗ್ರಹಿಸಿ, ಲಸಿಕೆ ನೀಡುವ ಸ್ಥಳದ ಕುರಿತು ತಮ್ಮ ವ್ಯಾಪ್ತಿಯ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಇನ್ನು ಸಿಬ್ಬಂದಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಮತ್ತು ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆ ಪಡೆಯುವವರಿಗೆ ಸ್ಲಿಪ್ ಕಡ್ಡಾಯವಿಲ್ಲ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಪೆÇ್ರಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ ವೇದಿಕೆಯಲ್ಲಿದ್ದರು. ಮಹಾನಗರಪಾಲಿಕೆ ಜಂಟಿ ಆಯುಕ್ತ ಅಜೀಜ್ ದೇಸಾಯಿ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಡಾ.ಲಕ್ಷ್ಮೀಕಾಂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ , ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ ಸೇರಿದಂತೆ ಜಿಲ್ಲೆಯ ತಹಸೀಲ್ದಾರರು,ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು,ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು