ʻಇಂದು ಪ್ರಧಾನಿ ಮೋದಿಯಿಂದ ಗೋವಾದ ʻಮೋಪಾʼ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

ನವದೆಹಲಿ: ದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೋವಾದಲ್ಲಿ ಮೊಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Mopa International Airport)ವನ್ನು ಉದ್ಘಾಟಿಸಲಿದ್ದಾರೆ.
ದೇಶಾದ್ಯಂತ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಕೇಂದ್ರದ ನಿರಂತರ ಪ್ರಯತ್ನದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
2016ರ ನವೆಂಬರ್‌ನಲ್ಲಿ ಪ್ರಧಾನಿಯವರು ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದ್ದರು.
ಸುಮಾರು 2,870 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾದ ಈ ವಿಮಾನ ನಿಲ್ದಾಣವನ್ನು ಸುಸ್ಥಿರ ಮೂಲಸೌಕರ್ಯಗಳ ಥೀಮ್‌ನಲ್ಲಿ ನಿರ್ಮಿಸಲಾಗಿದೆ ಮತ್ತು ಸೌರ ವಿದ್ಯುತ್ ಸ್ಥಾವರ, ಹಸಿರು ಕಟ್ಟಡಗಳು, ರನ್‌ವೇಯಲ್ಲಿ ಎಲ್‌ಇಡಿ ದೀಪಗಳು, ಮಳೆನೀರು ಕೊಯ್ಲು, ಅತ್ಯಾಧುನಿಕ ಒಳಚರಂಡಿ ಸಂಸ್ಕರಣೆಯನ್ನು ಹೊಂದಿದೆ.