ಅ. 24 ರಿಂದ ಮೂರು ದಿನ 'ಭಾರತ್ ಜೋಡೋ ಯಾತ್ರೆ'ಗೆ ಬಿಡುವು

ಅ. 24 ರಿಂದ ಮೂರು ದಿನ 'ಭಾರತ್ ಜೋಡೋ ಯಾತ್ರೆ'ಗೆ ಬಿಡುವು

ಬೆಂಗಳೂರು : ಅ.24 ರಿಂದ 26 ರವರೆಗೆ ಮೂರು ದಿನ 'ಭಾರತ್ ಜೋಡೋ ಯಾತ್ರೆ'ಗೆ ಬಿಡುವು ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಮೂರು ದಿನಗಳ ಕಾಲ ಯಾತ್ರೆಯಿಂದ ಬಿಡುವು ಪಡೆಯಲಿರುವ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಸದ್ಯ ರಾಹುಲ್ ನೇತೃತ್ವದ ಯಾತ್ರೆ ರಾಯಚೂರಿನ ಗಿಲ್ಲೆಸೂಗೂರು ತಲುಪಿದೆ. ಸಂಜೆ 4 ಗಂಟೆಗೆ ಎಕೆರೆಬೂದೂರು ಗ್ರಾಮದಿಂದ ಯಾತ್ರೆ ಆರಂಭವಾಗಿ ಸಂಜೆ 7 ಗಂಟೆಗೆ ಯುರಗೇರಾ ಗ್ರಾಮದ ಬಸ್ ನಿಲ್ದಾಣದಲ್ಲಿ ವಿರಾಮ ಪಡೆಯಲಿದೆ. ರಂಗನಾಥ ಸ್ವಾಮಿ ದೇವಾಲಯದಲ್ಲಿ ರಾತ್ರಿ ವಾಸ್ತವ್ಯ ಹೂಡಲಾಗುತ್ತದೆ.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ನಡೆದಿದ್ದಂತ ಚುನಾವಣೆಯ ಫಲಿತಾಂಶದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಅವರು ಅಕ್ಟೋಬರ್ 26, 2022ರಂದು ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.ಹಿರಿಯ ಶಾಸಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಸುಮಾರು 9,000 ಪ್ರತಿನಿಧಿಗಳು ಮತ ಚಲಾಯಿಸಿದರು.