ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ, ಸಹಾಯಕಿಯರಿಗೆ ಎಸ್‌ಎಸ್‌ಎಲ್ಸಿ ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡ ಬದಲಿಸುತ್ತಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ ಮತ್ತು ಸಹಾಯಕರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಕಡ್ಡಾಯಗೊಳಿಸಲಾಗುವುದು.
ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಮತ್ತು ಸಹಾಯಕಿಯರ ಹುದ್ದೆಗಳಿಗೆ ಏಳನೇ ತರಗತಿ ಮಾನದಂಡ ಇತ್ತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವದರಿಂದ ಹೆಚ್ಚಿನ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು, ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ.