ಅಂಜನಾದ್ರಿ ಬೆಟ್ಟ; ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂಬ ಬ್ಯಾನರ್ ತೆರವು
ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಡಿ. 5ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಲಕ್ಷಾಂತರ ಮಾಲಧಾರಿಗಳು ಆಗಮಿಸಲಿದ್ದಾರೆ. ಹೀಗಾಗಿ ಅಂದು ಹಿಂದೂಯೇತರರು ವ್ಯಾಪಾರ ಮಾಡಬಾರದೆಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಫ್ಲೆಕ್ಸ್ ಹಾಕಿದ್ದರು