ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಗೆಹ್ಲೋಟ್ ಆಗಮನ

ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಗೆಹ್ಲೋಟ್ ಆಗಮನ

ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಇಂದು ಭೇಟಿ ನೀಡಿದರು. ಗಂಗಾವತಿ ತಾ| ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಗೆಹ್ಲೋಟ್ ಬೆಳಿಗ್ಗೆ 7.40 ಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ರಾಜ್ಯಪಾಲರ ಭೇಟಿ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು. ಬಳಿಕ ಬಳ್ಳಾರಿಗೆ ರಾಜ್ಯಪಾಲರು ತೆರಳಲಿದ್ದಾರೆ. ಇದಕ್ಕೂ ಮುನ್ನ ವಿದ್ಯಾದಾಸ ಬಾಬಾ ಎಂಬುವವರು ಸ್ಥಳದಲ್ಲಿ ಹೈಡ್ರಾಮಾ ನಡೆಸಿದ್ದು, ಅಧಿಕಾರಿಗಳು & ಬಾಬಾ ನಡುವೆ ಮಾತಿನ ಚಕಮಕಿ ನಡೆಯಿತು.