ಅಂಜನಾದ್ರಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಬೇಡ: ಹಿಂಜಾವೇ ಮನವಿ

ಅಂಜನಾದ್ರಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಬೇಡ: ಹಿಂಜಾವೇ ಮನವಿ

ಕೊಪ್ಪಳ: ಅಂಜನಾದ್ರಿಯಲ್ಲಿ ಹಿಂದೂಗಳನ್ನು ಹೊರತುಪಡಿಸಿ ವ್ಯಾಪಾರ ವಹಿವಾಟು ನಡೆಸದಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ. ಡಿ.5ರಂದು ಹನುಮ ಜಯಂತಿ ಇರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳು ಅಂಜನಾದ್ರಿಗೆ ಬರುತ್ತಿದ್ದಾರೆ. ಹಾಗಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಸಂಜೀವ್‌ ಮನವಿ ಮಾಡಿದ್ದಾರೆ. ಇನ್ನು ಜಿಲ್ಲಾಡಳಿತ ಅಂಜನಾದ್ರಿಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.