ಅಂತಿಮಗೊಳ್ಳದ ಕ್ಷೇತ್ರ ಆಯ್ಕೆ: ಕೋಲಾರವೋ, ವರುಣವೋ? ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಶಿವಮೊಗ್ಗ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವಡೆ ಸ್ಪರ್ಧೆಗೆ ಆಹ್ವಾನ ಇದೆ. ಆದರೆ ಹೈಕಮಾಂಡ್ ಹೇಳಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ. ಕೋಲಾರ, ಚಿಕ್ಕನಾಯಕನಹಳ್ಳಿ ಸೇರಿ ರಾಜ್ಯದ ಹಲವಡೆ ಸ್ಪರ್ಧೆಗೆ ಆಹ್ವಾನ ಬಂದಿದೆ. ನಾನು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಇನ್ನೂ ಫೈನಲ್ ಆಗಿಲ್ಲ, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ ಬಾರಿ ಅಲ್ಲಿಂದಲೇ ಸ್ಪರ್ಧೆ ಮಾಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ. ಆದರೆ ಇನ್ನೂ ಈ ಬಗ್ಗೆ ಅಧಿಕೃತವಾಗಿ ಎಲ್ಲೂ ಹೇಳಿಲ್ಲ. ಹೀಗಾಗಿ ಈ ಬಾರಿಯ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.